ನ್ಯೂಸ್ ನಾಟೌಟ್ : ಅಪಾರ್ಟ್’ಮೆಂಟ್’ಗಳಲ್ಲಿ ನಾಯಿ-ಬೆಕ್ಕು ಸಾಕುವುದಕ್ಕೆ ನಿರ್ಬಂಧ ವಿಧಿಸುವಂತಿಲ್ಲ ಎಂದಿದೆ. ಜೊತೆಗೆ ಬೀದಿ ನಾಯಿಗಳಿಗೆ ಆಹಾರ ನೀಡಲು ಕೂಡ ನಿಯಮಗಳನ್ನು ಬಿಬಿಎಂಪಿ ಜಾರಿಗೊಳಿಸಿದೆ. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸಲಹೆ, ಕರ್ನಾಟಕ ಸಾಕುಪ್ರಾಣಿಗಳ ಸುತ್ತೋಲೆ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ಆಧರಿಸಿ ಬಿಬಿಎಂಪಿಯು ಪ್ರತ್ಯೇಕ ಮಾರ್ಗಸೂಚಿ ರಚಿಸಿ ಬಿಡುಗಡೆ ಮಾಡಿದೆ.
ಸಮುದಾಯ ಪ್ರಾಣಿಗಳಿಗೆ ಆಹಾರ ನೀಡುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ತಿಳಿಸಿದೆ. ನಾಯಿ, ಬೆಕ್ಕುಗಳಿಗೆ ಆಹಾರ ನೀಡುವಾಗ ಅಂತರವನ್ನು ಕಾಪಾಡಿಕೊಳ್ಳಬೇಕು. ನಾಯಿ, ಬೆಕ್ಕುಗಳು ಆಹಾರಕ್ಕಾಗಿ ಆಕ್ರಮಣ ಮಾಡದಂತೆ ನೋಡಿಕೊಳ್ಳಲು ಸಾಧ್ಯವಾದರೆ ಮಾತ್ರ ಸಾರ್ವಜನಿಕರು ಅವುಗಳಿಗೆ ಆಹಾರ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದೆ. ರಾತ್ರಿ 11.30ರ ನಂತರ, ಬೆಳಿಗ್ಗೆ 5ರ ಮೊದಲು ಆಹಾರ ನೀಡಬಾರದು. ಪ್ರಾಣಿಗಳಿಗೆ ಹಸಿ ಮಾಂಸ ಮತ್ತು ಹೆಚ್ಚಿನ ಸಕ್ಕರೆ ಅಂಶವಿರುವ ಬಿಸ್ಕತ್ತುಗಳನ್ನು ನೀಡಬಾರದು. ಈ ಆಹಾರ ತೀವ್ರ ಚುರುಕಿನ ಪ್ರಾಣಿಗಳನ್ನಾಗಿ ಮಾಡುತ್ತದೆ. ಆಹಾರವನ್ನು ಬೀದಿಯಲ್ಲಿ ಬಿಸಾಡಬಾರದು. ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ನಾಯಿಗಳಿಗೆ ಆಹಾರ ಸಿಗುವುದನ್ನು ತಪ್ಪಿಸಬೇಕು. ನಿಗದಿತ ಸ್ಥಳದಲ್ಲಿ ಮಾತ್ರ ಆಹಾರ ನೀಡಬೇಕು ಎಂದಿದೆ.
ಮಾಲೀಕರು ತಮ್ಮ ಒಡೆತನದ ಪ್ರಾಣಿಗಳಿಗೆ ನೋವು ಉಂಟು ಮಾಡುವ, ಅಸ್ವಸ್ಥಗೊಳಿಸುವ ಕೆಲಸ ಮಾಡದಂತೆ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ಸ್ ಮತ್ತು ಅಪಾರ್ಟ್ಮೆಂಟ್ ಮಾಲೀಕರಿಗೆ ಬೈ–ಲಾ ರೂಪಿಸಬೇಕು. ಪ್ರಾಣಿಗಳ ಸಂರಕ್ಷಣೆಗೆ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪಾಲಿಸಬೇಕು. ಸಾರ್ವಜನಿಕ ಪ್ರದೇಶದಲ್ಲಿ ಸಾಕು ಪ್ರಾಣಿಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ.
Click