ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕೆವಿಜಿ ಕಾನೂನು ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಯರಾಮ ವೈ. ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ, ಸಮಾಜ ಶಾಸ್ತ್ರ ಉಪನ್ಯಾಸಕಿ, ಮಾನವಿಕ ಸಂಘದ ಸಂಚಾಲಕಿ ರೇಷ್ಮಾ ಎಂ.ಎಂ. ಉಪಸ್ಥಿತರಿದ್ದರು. ಉಪನ್ಯಾಸಕಿ ರೇಷ್ಮಾ ಎಂ.ಎಂ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್. ವಂದಿಸಿದರು.