ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಕಾಡಿನೊಳಗೆ ವಿದೇಶಿ ಮಹಿಳೆ ಪತ್ತೆ..? ಅಳುತ್ತಿರುವುದು ಕೇಳಿ ಓಡಿದ ಕುರಿಗಾಹಿಗಳು..!

ನ್ಯೂಸ್ ನಾಟೌಟ್: 50 ವರ್ಷದ ಮಹಿಳೆಯೊಬ್ಬರು ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಆಕೆಯ ಯುಎಸ್ ಪಾಸ್‌ಪೋರ್ಟ್‌ನ ಫೋಟೊಕಾಪಿ ಮತ್ತು ತಮಿಳುನಾಡು ವಿಳಾಸದೊಂದಿಗೆ ಆಧಾರ್ ಕಾರ್ಡ್ ಸೇರಿದಂತೆ ಇತರ ದಾಖಲೆಗಳು ಆಕೆಯ ಬಳಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ(ಜು.29) ವರದಿ ಮಾಡಿದ್ದಾರೆ. ಶನಿವಾರ(ಜು.27) ಸಂಜೆ ಜಿಲ್ಲೆಯಿಂದ ಸರಿಸುಮಾರು 450 ಮೀಟರ್ ದೂರದಲ್ಲಿರುವ ಸೋನುರ್ಲಿ ಗ್ರಾಮದಲ್ಲಿ ಮಹಿಳೆ ಅಳುತ್ತಿರುವುದು ಸ್ಥಳೀಯ ಕುರಿಗಾಹಿಗಳಿಗೆ ಕೇಳಿಬಂದಿತ್ತು. ಆಕೆ ಸರಪಳಿ ಸಿಲುಕಿಕೊಂಡು ಸಂಕಷ್ಟದಲ್ಲಿರುವುದನ್ನು ಕಂಡು ಕುರುಬರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದರು. ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸಾವಂತವಾಡಿ ಮತ್ತು ಸಿಂಧುದುರ್ಗದ ಓರೋಸ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಆಕೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಕ್ಷೀಣಿಸಿದ್ದ ಸ್ಥಿತಿಯಲ್ಲಿದ್ದ ಕಾರಣ, ಆಕೆಯನ್ನು ನಂತರ ಹೆಚ್ಚಿನ ಆರೈಕೆಗಾಗಿ ಗೋವಾ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸಲಾಯಿತು. ಆಕೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಆಕೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆಕೆಯ ಬಳಿ ಈ ಹಿಂದಿನ ವೈದ್ಯಕೀಯ ಪ್ರಿಸ್ಕ್ರಿಪ್ಷನ್​​ ಇದ್ದು, ಅದನ್ನು ಪರಿಶೀಲಿಸಿದ್ದೇವೆ ಎಂದು ವೈದ್ಯರು ಹೇಳಿದ್ದಾರೆ. ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಮತ್ತು ಆಕೆಯ ಅವಧಿ ಮುಗಿದಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಪಾಸ್‌ಪೋರ್ಟ್‌ನ ಫೋಟೊಕಾಪಿ ಸೇರಿದಂತೆ ದೊರೆತ ದಾಖಲೆಗಳ ಆಧಾರದ ಮೇಲೆ ಮಹಿಳೆಯನ್ನು ಲಲಿತಾ ಕಯಿ ( Lalita Kayi) ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಆಕೆಯ ರಾಷ್ಟ್ರೀಯತೆಯನ್ನು ನಿರ್ಧರಿಸಲು ಪೊಲೀಸರು ಈ ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಈಕೆ ಅಮೆರಿಕಾದ ಮಹಿಳೆಯಾಗಿದ್ದು, ಕಳೆದ 10 ವರ್ಷಗಳಿಂದ ಭಾರತದಲ್ಲಿದ್ದಾರೆ. ಮಹಿಳೆಯ ಪ್ರಸ್ತುತ ಆರೋಗ್ಯ ಸ್ಥಿತಿ ಆತಂಕಕಾರಿಯಾಗಿರುವುದರಿಂದ ಪೊಲೀಸರಿಗೆ ಹೇಳಿಕೆ ಪಡೆಯಲು ಕಷ್ಟಸಾಧ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯು ಒಂದೆರಡು ದಿನಗಳಿಂದ ಏನನ್ನೂ ತಿನ್ನದ ಕಾರಣ ಮತ್ತು ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ತೀವ್ರ ಅಸ್ವಸ್ಥರಾಗಿದ್ದಾರೆ. Click