ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ನೂತನ ಕೋಚ್‌ ಆಗಿ ಆಯ್ಕೆ, ಬಿಸಿಸಿಐ ಕಾರ್ಯದರ್ಶಿ ಈ ಬಗ್ಗೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಟೀಂ ಇಂಡಿಯಾದ (Team India)ನೂತನ ಕೋಚ್‌ ಆಗಿ ಗೌತಮ್‌ ಗಂಭೀರ್‌ (Gautam Gambhir) ಮಂಗಳವಾರ(ಜುಲೈ 8) ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಿಸಲಾಗಿದೆ ಎಂದು ಜಯ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೀಂ ಇಂಡಿಯಾದ ನೂತನ ಕೋಚ್‌ ಗೌತಮ್‌ ಗಂಭೀರ್‌ ಅವರನ್ನು ನಾನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಆಧುನಿಕ ಕ್ರಿಕೆಟ್‌ ಬಹಳ ವೇಗವಾಗಿ ಬದಲಾಗುತ್ತಿದ್ದು ಗೌತಮ್ ಅವರು ಈ ಬದಲಾವಣೆಯನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ಹಲವು ಪಾತ್ರಗಳನ್ನು ನಿರ್ವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲು ಅವರು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂಬ ವಿಶ್ವಾಸ ನನಗಿದೆ. ಹೊಸ ಪ್ರಯಾಣವನ್ನು ಪ್ರಾರಂಭಿಸುತ್ತಿರುವ ಗೌತಮ್‌ ಗಂಭೀರ್‌ ಅವರಿಗೆ ಬಿಸಿಸಿಐ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಜಯ್‌ ಶಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.