ನ್ಯೂಸ್ ನಾಟೌಟ್: ಉತ್ತರಪ್ರದೇಶದ ಮಥುರಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಲ್ಲಿನ ಕೃಷ್ಣ ವಿಹಾರ್ ಕಾಲೋನಿಯಲ್ಲಿ ಬೃಹತ್ ನೀರಿನ ಟ್ಯಾಂಕ್ವೊಂದು (Water Tank Collapsed) ಕುಸಿದು, ಇಬ್ಬರು ಮೃತಪಟ್ಟು 13 ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಕೃಷ್ಣ ವಿಹಾರ್ ಕಾಲೋನಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಈ ಬೃಹತ್ ಟ್ಯಾಂಕ್ ನಿರ್ಮಿಸಲಾಗಿತ್ತು. ಆದರೆ ಕೇವಲ ಮೂರು ವರ್ಷದಲ್ಲಿ ಟ್ಯಾಂಕ್ ಕುಸಿತಗೊಂಡ ಕಾರಣ ಕಳಪೆ ಕಾಮಗಾರಿಯ ಶಂಕೆ ವ್ಯಕ್ತವಾಗಿದೆ. ಟ್ಯಾಂಕ್ ಕುಸಿತಗೊಂಡು ಹಲವು ಮನೆಗಳು ಜಖಂಗೊಂಡಿವೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.