- +91 73497 60202
- [email protected]
- November 21, 2024 11:09 PM
ವಯನಾಡ್ ಭೂಕುಸಿತ: ಮೃತರ ಸಂಖ್ಯೆ 36ಕ್ಕೆ ಏರಿಕೆ..! ಸಿಎಂ ಪಿಣರಾಯಿ ಜತೆ ಮಾತನಾಡಿ ಅಗತ್ಯ ನೆರವಿನ ಭರವಸೆ ನೀಡಿದ ಮೋದಿ
ನ್ಯೂಸ್ ನಾಟೌಟ್: ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದ ಘಟನೆಯಲ್ಲಿ ಸಾವಿನ ಸಂಖ್ಯೆ 7 ರಿಂದ 36ಕ್ಕೆ ಏರಿಕೆಯಾಗಿದೆ. 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಣರಾಯಿ ವಿಜಯ್ ಬಳಿ ಮಾತನಾಡಿದ್ದು, ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ವಯನಾಡಿನ ಕೆಲವು ಭಾಗಗಳಲ್ಲಿ ಭೂಕುಸಿತದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಬೇಗ ಗುಣಮುಖರಾಗಲಿ. ಭೂಕುಸಿತದ ಕುರಿತು ಪಿಣರಾಯಿ ವಿಜಯ್ ಅವರೊಂದಿಗೆ ಮಾತನಾಡಿದ್ದೇನೆ ಎಲ್ಲಾ ನೆರವನ್ನು ನೀಡಲು ಕೇಂದ್ರ ಸಿದ್ಧವಿದೆ ಎಂದು ಮೋದಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಚುರಲಮಲದಿಂದ ಮುಂಡಕ್ಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದ್ದು, ಮುಂಡಕ್ಕೈಗೆ ಸಂಪರ್ಕ ಕಡಿತಗೊಂಡಿದೆ. ಮಾಹಿತಿಯ ಪ್ರಕಾರ , ಭಾರೀ ಮಳೆಯ ನಂತರ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದೆ. ಆರೋಗ್ಯ ಇಲಾಖೆ- ರಾಷ್ಟ್ರೀಯ ಆರೋಗ್ಯ ಮಿಷನ್ ತುರ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಮತ್ತು ಸಹಾಯವಾಣಿ ಸಂಖ್ಯೆಗಳನ್ನು 9656938689 ಮತ್ತು 8086010833 ನೀಡಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ