ನ್ಯೂಸ್ ನಾಟೌಟ್: ವಿಶ್ವ ಓಆರ್ಎಸ್ ಸಪ್ತಾಹದ ಪ್ರಯುಕ್ತ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪೀಡಿಯಾಟ್ರಿಕ್ ಹಾಗೂ ಕಮ್ಯುನಿಟಿ ಮೆಡಿಸಿನ್ ವಿಭಾಗದ ವತಿಯಿಂದ ವಿಶ್ವ ಓಆರ್ಎಸ್ ದಿನವನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪೀಡಿಯಾಟ್ರಿಕ್ ವಿಭಾಗದ ಪ್ರಾಧ್ಯಾಪಕಿ ಡಾ. ಸುಧಾ ರುದ್ರಪ್ಪ, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಓಆರ್ಎಸ್ನ ಮಹತ್ವದ ಕುರಿತು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕಮ್ಯುನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ. ದಿನೇಶ್ ಪಿ.ವಿ. ಉಪಸ್ಥಿತರಿದ್ದರು. ಪೀಡಿಯಾಟ್ರಿಕ್ ಹಾಗೂ ಕಮ್ಯುನಿಟಿ ಮೆಡಿಸಿನ್ ವಿಭಾಗ ಸ್ನಾತಕೋತ್ತರ ಪಧವೀಧರ ವಿದ್ಯಾರ್ಥಿಗಳಿಂದ ಓಆರ್ಎಸ್ ತಯಾರಿಕೆ ಹಾಗೂ ಹಲವಾರು ಉಪಯುಕ್ತ ವಿಚಾರಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೆವಿಜಿ ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಓಆರ್ಎಸ್ನ ಮಹತ್ವ ಸಾರುವ ಛದ್ಮವೇಷ (skit) ನಡೆಯಿತು. ಬಳಿಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವೈದ್ಯಕೀಯ, ನರ್ಸಿಂಗ್ ವಿದ್ಯಾರ್ಥಿಗಳು, ಹಾಗೂ ಕಾಲೇಜಿನ ಭೋದಕ, ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.