- +91 73497 60202
- [email protected]
- November 22, 2024 3:53 AM
ನ್ಯೂಸ್ ನಾಟೌಟ್: ಉಕ್ಕಿ ಹರಿಯುತ್ತಿರುವ ನದಿಯೊಂದಕ್ಕೆ ದುಷ್ಕರ್ಮಿಗಳು 50ಕ್ಕೂ ಹೆಚ್ಚು ಹಸುಗಳನ್ನು ತಳ್ಳಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೇ ಸೇತುವೆಯೊಂದರ ಬಳಿ ದುಷ್ಕರ್ಮಿಗಳು ಹಸುಗಳನ್ನು ನದಿಗೆ ತಳ್ಳುತ್ತಿರುವ ವೀಡಿಯೋ ವೈರಲ್ ಆಗಿದ್ದು, ನಾಲ್ವರ ಮೇಲೆ ಭಾರತೀಯ ನ್ಯಾಯ ಸಂಹಿತೆಯಲ್ಲಿನ ಗೊ ಹತ್ಯೆ ನಿಷೇಧ ಕಾನೂನಿನ ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ. 20 ಹಸುಗಳು ಈಗಾಗಲೇ ಮೃತಪಟ್ಟಿವೆ. ಮಂಗಳವಾರ(ಆ.27) ಘಟನೆ ನಡೆದಿದೆ ಎನ್ನಲಾಗಿದೆ. ವಿನೋದ್ ಪರಾಶರ್ ಎಂಬ ವ್ಯಕ್ತಿಯು ತಾನು ಪ್ರತ್ಯಕ್ಷದರ್ಶಿ ಎಂದು ಹೇಳಿಕೊಂಡಿದ್ದು, ಈತನ ಹೇಳಿಕೆ ಮೇರೆಗೆ ಬೇಟಾ ಬಗ್ರಿ, ರವಿ ಬಗ್ರಿ, ರಾಮ್ ಪಾಲ್ ಚೌಧರಿ, ರಾಜುಲು ಚೌಧರಿ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದು. ಅಪ್ರಾಪ್ತ ಬಾಲಕನೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ