ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಹಿರಿಯ ವೈದ್ಯ, ಹಾಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) (AOLE) ಅಧ್ಯಕ್ಷರಾಗಿರುವ ಡಾ| ಕೆ.ವಿ. ಚಿದಾನಂದ ಅವರಿಗೆ ವಿಶಿಷ್ಟ ಸೇವಾ ಪುರಸ್ಕಾರ ಒಲಿದು ಬಂದಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘ ಇದರ ಆಶ್ರಯದಲ್ಲಿ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವದ ಸಂದರ್ಭದಲ್ಲಿ ಮೈಸೂರಿನಲ್ಲಿ ಈ ಗೌರವವನ್ನು ನೀಡಲಾಗಿದೆ. ಡಾ| ಕೆ.ವಿ. ಚಿದಾನಂದ ಅವರು ಹಾಲಿ AOLE (R) ಅಧ್ಯಕ್ಷರಾಗಿ ಗ್ರಾಮೀಣ ಭಾಗದಲ್ಲಿ ಜನರ ಸೇವೆಯೇ ದೇವರ ಸೇವೆ ಎಂದು ಭಾವಿಸಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ತಂದೆ ದಿವಂಗತ ಕುರುಂಜಿ ವೆಂಕಟರಮಣ ಗೌಡರ ಕನಸನ್ನು ಸಾಕಾರಗೊಳಿಸುತ್ತಾ ಸಾಗಿದ್ದಾರೆ. ಕಡಿಮೆ ವೆಚ್ಚದಲ್ಲಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಲಭಿಸುವಂತೆ ಮಾಡಿದ್ದಾರೆ. ವೈದ್ಯರಾಗಿ ನೂರಾರು ಜೀವಗಳನ್ನು ಉಳಿಸಿದ್ದಾರೆ. ಸಾವಿರಾರು ಯುವ ವೈದ್ಯರಿಗೆ ಮಾರ್ಗದರ್ಶನ ನೀಡಿದ್ದಾರೆ. ತಾಲೂಕಿನಲ್ಲಿ ಹಲವಾರು ಉದ್ಯೋಗಗಳನ್ನೂ ಸೃಷ್ಟಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಯಿತು. ಇವರನ್ನು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ಬೆಂಗಳೂರು ಇದರ ವಿಶ್ರಾಂತ ಕುಲಪತಿಗಳಾದ ಡಾ| ಕಾಂತ ಎಸ್ . ಜಾಧವ್ ಗೌರವಿಸಿದರು. ಹಲವಾರು ಗಣ್ಯರ ಸಮ್ಮುಖದಲ್ಲಿ ಡಾ| ಕೆ.ವಿ ಚಿದಾನಂದ ಅವರು ಗೌರವ ಪಡೆದುಕೊಂಡರು.