- +91 73497 60202
- [email protected]
- November 22, 2024 5:21 PM
ನ್ಯೂಸ್ ನಾಟೌಟ್: ಅಯೋಧ್ಯೆಯ (Ayodhya) ರಾಮಮಂದಿರದ ಪ್ರಮುಖ ಮಾರ್ಗಗಳಾದ ಭಕ್ತಿಪಥ ಮತ್ತು ರಾಮಪಥದಲ್ಲಿ 50 ಲಕ್ಷ ಮೌಲ್ಯದ ದೀಪಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೂರು ದಾಖಲಾಗಿದೆ.ಸುಮಾರು 3,800 ಬಿದಿರಿನ ದೀಪಗಳು ಮತ್ತು 36 ಗೋಬೋ ಪ್ರೊಜೆಕ್ಟರ್‌ಗಳು ಕಾಣೆಯಾಗಿವೆ ಎನ್ನಲಾಗಿದೆ. ಖಾಸಗಿ ಸಂಸ್ಥೆಗಳಾದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣಾ ಆಟೋಮೊಬೈಲ್ಸ್ ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿಪಥದಲ್ಲಿ 96 ಗೋಬೋ ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಿದ್ದವು. ಭಕ್ತಿ ಪಥವು ಅಯೋಧ್ಯೆಯ ರಾಮಮಂದಿರಕ್ಕೆ ಹೋಗುವ ಮುಖ್ಯ ರಸ್ತೆಯಾಗಿದ್ದು, ಶೃಂಗಾರ್ ಘಾಟ್ ಅನ್ನು ಹನುಮಾನ್ ಗರ್ಹಿ ಮತ್ತು ಅಂತಿಮವಾಗಿ ದೇವಸ್ಥಾನಕ್ಕೆ ಸಂಪರ್ಕಿಸುತ್ತದೆ. ಅಯೋಧ್ಯೆಯ ಮತ್ತೊಂದು ಪ್ರಮುಖ ಮಾರ್ಗವಾದ ರಾಮಪಥ, 13 ಕಿಮೀ ಉದ್ದದ ಹೆದ್ದಾರಿಯಾಗಿದ್ದು, ಅದು ಸದಾತ್‌ಗಂಜ್ ಅನ್ನು ನಯಾ ಘಾಟ್‌ಗೆ ಸಂಪರ್ಕಿಸುತ್ತದೆ.ಖಾಸಗಿ ಸಂಸ್ಥೆಗಳು ಅಯೋಧ್ಯೆಯ ಅತ್ಯಂತ ಭದ್ರತಾ ಪ್ರದೇಶದಲ್ಲಿರುವ ಭಕ್ತಿಪಥ ಮತ್ತು ರಾಮಪಥದಲ್ಲಿ ಅಳವಡಿಸಲಾದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ 3,800 ಬಿದಿರು ಮತ್ತು 36 ಪ್ರೊಜೆಕ್ಟರ್ ಲೈಟ್‌ಗಳನ್ನು ಸ್ಥಾಪಿಸಲಾಗಿದ್ದು, ಕಳ್ಳತನವಾಗಿದೆ ಎಂದು ಆ.9 ರಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ