ನ್ಯೂಸ್ ನಾಟೌಟ್: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲರ ಭದ್ರತೆ ಹೆಚ್ಚಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬುಲೆಟ್ ಪ್ರೂಫ್ ಕಾರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಬಳಸುತ್ತಿದ್ದಾರೆ ಎನ್ನಲಾಗಿದೆ.
ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪದ ಕುರಿತು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಮೇಲೆ ರಾಜ್ಯದಾದ್ಯಂತ ಕಾಂಗ್ರೆಸ್ ಬೆಂಬಲಿಗರು, ಸಿದ್ದರಾಮಯ್ಯ ಅಭಿಮಾನಿಗಳೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆಗಳು ಕೂಡ ನಡೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಬುಲೆಟ್ ಪ್ರೂಫ್ ಕಾರು ಉಪಯೋಗಿಸುತ್ತಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಮೇಲೆ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸಂಪುಟದ ಮಂತ್ರಿಗಳು, ಶಾಸಕರ ಆಕ್ರೋಶ ತೀವ್ರವಾಗಿದೆ. ಈ ಹಿಂದೆ ಬುಲೆಟ್ ಪ್ರೂಫ್ ಕಾರು ಇದ್ದರೂ ಅದನ್ನು ಬಳಕೆ ಮಾಡದೆ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು.
Click