ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಿದ ಎರಡು ದಿನಗಳ ಸಕ್ಷಮ್ ಕಾರ್ಯಾಗಾರದ ಸಮಾರೋಪ ಸಮಾರಂಭ ಗುರುವಾರ (ಆ.22) ನೆರವೇರಿತು.
ಬೆಂಗಳೂರು ಫಾರ್ಮಸ್ಯುಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಇದರ ಸಹಯೋಗದೊಂದಿಗೆ ಆ.21 ರಂದು ಆರಂಭಗೊಂಡ ಕಾರ್ಯಾಗಾರದಲ್ಲಿ ಸಂವಹನ ಮತ್ತು ಕಾರ್ಯಕ್ಷಮತೆ ಹೆಚ್ಚಿಸುವ ಹಲವಾರು ಮಹತ್ವದ ವಿಚಾರಗಳ ಬಗ್ಗೆ ತಿಳಿಸಿಕೊಡಲಾಯಿತು.
ಕಾಲೇಜಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರು ಇದರ ಪ್ರಯೋಜನ ಪಡೆದುಕೊಂಡರು.
ಕಾರ್ಯಾಗಾರ ನಡೆಸಿಕೊಟ್ಟ ಶ್ರೀಹರಿ ಪಿ. ಗುಪ್ತ ಅವರನ್ನು ಕಾಲೇಜಿನ ದ್ರವ್ಯಗುಣ ವಿಭಾಗದ ಪ್ರೊಫೆಸರ್ ಡಾ. ಕವಿತಾ ಬಿ.ಎಂ. ಸ್ಮರಣಿಕೆ ನೀಡಿ ಗೌರವಿಸಿದರು. ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ.ಜಿ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ, ಕಾರ್ಯಾಗಾರದ ಫಲಾನುಭವಿಗಳಾದ ಕಿರಿಯ ವೈದ್ಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಬೆಂಗಳೂರು ಫಾರ್ಮಸಿಟಿಕಲ್ಸ್ ಹಾಗೂ ರಿಸರ್ಚ್ ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಇದರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯರಾದ ಡಾ. ಅನುಷಾ ಮಡಪ್ಪಾಡಿ ಹಾಗೂ ಡಾ. ಅಪೂರ್ವ ನಿರೂಪಿಸಿ, ಡಾ. ಅನುಷಾ ಮಡಪ್ಪಾಡಿ ವಂದಿಸಿದರು.