ಗುಡಿಸಲಿಗೆ ನುಗ್ಗಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯನ್ನು ಕಚ್ಚಿ ಕೊಂದ ಬೀದಿ ನಾಯಿಗಳು..! ವೃದ್ಧೆಯ ಮಗ ನೀಡಿದ ದೂರಿನಲ್ಲೇನಿದೆ..?

ನ್ಯೂಸ್ ನಾಟೌಟ್: ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ವೃದ್ಧೆಯನ್ನು ಗುಡಿಸಲಿಗೆ ನುಗ್ಗಿ ಬೀದಿನಾಯಿಗಳು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ರಾಜಣ್ಣ ಸಿರ್ಸಿಲಾ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಮುಸ್ತಾಬಾದ್ ಮಂಡಲದ ಕೇಂದ್ರ ಕಛೇರಿಯ ಸೇವಾಲಾಲ್ ತಾಂಡಾ ಪ್ರದೇಶದ ತನ್ನ ಗುಡಿಸಲಿನಲ್ಲಿ ಮಲಗಿದ್ದ ವೃದ್ಧೆಯೊಬ್ಬಳನ್ನು ನಾಯಿಗಳ ಹಿಂಡು ಕಚ್ಚಿಹಾಕಿವೆ. ನಾಯಿಗಳು ಅವರ ದೇಹದ ಭಾಗಗಳನ್ನು ತಿಂದು ಬಳಿಕ ಮನೆಯಿಂದ ಹೊರಗೆ ಬಂದಿವೆ, ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕಾರಣ ವೃದ್ಧೆಗೆ ಏಳಲು ಮತ್ತು ಕೂಗಿಕೊಳ್ಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಮಹಿಳೆಯ ಮಗ ನೀಡಿದ ದೂರಿನ ಮೇರೆಗೆ ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಾಲಾನಗರದ ರಾಜೀವ್ ಕಾಲೋನಿಯಲ್ಲಿ ಆರು ಮಕ್ಕಳು ಸೇರಿದಂತೆ 16 ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. Click