ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಆಕೆಯ ಮೈ ಸುಟ್ಟಿರುವ ಘಟನೆ ಚಿತ್ರದುರ್ಗ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.
ನಾಗೇಶ್ ಎಂಬಾತ ಆ.15 ರಂದು ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ, ಪತ್ನಿಯ ಮುಖ, ಕೈ-ಕಾಲು, ತೊಡೆ ಸೇರಿ ಹಲವೆಡೆ ಸುಟ್ಟು ವಿಕೃತಿ ಮೆರೆದಿದ್ದಾನೆ. ಮಹಿಳೆಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆಕೆ ಚೇತರಿಸಿಕೊಂಡಿದ್ದಾರೆ. ಗಾಯಾಳು ಮಹಿಳೆ ಬಳ್ಳಾರಿಯ ತವರುಮನೆಯಲ್ಲಿದ್ದಾರೆ ಎನ್ನಲಾಗಿದೆ.
ನಾಗೇಶ್ನ ತಂದೆ ಚಂದ್ರಣ್ಣನ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಆ.19ರಂದು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಾಪತ್ತೆಯಾಗಿದ್ದಾರೆ.
Click