ನ್ಯೂಸ್ ನಾಟೌಟ್ : ರಾಜ್ಯದ ಸಚಿವಾಲಯದ ಕಡೆ ಸಾಗುವ ಮಾರ್ಗಕ್ಕೆ ಅಡ್ಡವಾಗಿ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಉರುಳಿಸಲು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ಯತ್ನಿಸಿದ್ದರು. ಇದರಿಂದಾಗಿ ನಡೆದ ಘರ್ಷಣೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಕಾರರು ಗಾಯಗೊಂಡಿದ್ದರು.
‘ನಬನ್ನಾ ಅಭಿಯಾನ’ದ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ 12 ಗಂಟೆಗಳ ಕಾಲ ‘ಬಂಗಾಳ ಬಂದ್’ಗೆ ಕರೆ ನೀಡಿದೆ. ಮುನ್ನಚ್ಚರಿಕಾ ಕ್ರಮವಾಗಿ ಕೋಲ್ಕತಾ ನಗರದಾದ್ಯಂತ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರಿ ಬಸ್ಗಳ ಚಾಲಕರು ಮತ್ತು ನಿರ್ವಾಹಕರಿಗೆ ಹೆಲ್ಮೆಟ್ ಧರಿಸಲು ಸೂಚನೆ ನೀಡಲಾಗಿದೆ. ಅದರಂತೆ ಕೂಚ್ ಬೆಹಾರ್ನಲ್ಲಿ ಎನ್ಬಿಎಸ್ಟಿಸಿ ಬಸ್ಗಳ ಚಾಲಕರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆಗಸ್ಟ್ 9ರಂದು ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಖಂಡಿಸಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಪ್ರತಿಭಟನಕಾರರು ಆಗ್ರಹಿಸಿದ್ದಾರೆ ಎಂದು ವರದಿ ತಿಳಿಸಿದೆ.
Click