ನ್ಯೂಸ್ ನಾಟೌಟ್: ಗ್ಯಾರಂಟಿಗಳ ವಿಚಾರವಾಗಿ ಸರ್ಕಾರದ ಮಟ್ಟದಲ್ಲೇ ಭಿನ್ನ ರಾಗ ಉಂಟಾಗುತ್ತಿದೆ ಮತ್ತು ಸರ್ಕಾರದ ಖಜಾನೆಗೆ ಹೊರೆಯಾಗುತ್ತದೆ ಇದನ್ನು ತಗ್ಗಿಸಲು ಸರ್ಕಾರ ಚಿಂತಿಸಿದೆ ಎನ್ನಲಾಗಿದೆ. ಹಲವು ಸಚಿವರು ಗ್ಯಾರಂಟಿಗಳ ಮಾನದಂಡದಲ್ಲಿ ಬದಲಾವಣೆ ಆಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಅಕ್ಟೋಬರ್ ಹೊತ್ತಿಗೆ ಆಪರೇಷನ್ ಬಿಪಿಎಲ್ ಕಾರ್ಡ್ಗೆ ಚಾಲನೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ಗಳ ಪರಿಶೀಲನೆ ನಡೆದರೆ ಅನರ್ಹ ಫಲಾನುಭವಿಗಳು ಪತ್ತೆಯಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ಅನರ್ಹರು ಸಹಜವಾಗಿಯೇ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯಬೇಕಾಗುತ್ತದೆ ಎನ್ನುವುದು ಸರ್ಕಾರದ ಲೆಕ್ಕಾಚಾರ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ 14 ಲಕ್ಷಕ್ಕೂ ಹೆಚ್ಚು ಅಕ್ರಮ ಬಿಪಿಎಲ್ ಕಾರ್ಡ್ ಇದೆ ಎನ್ನಲಾಗುತ್ತಿದೆ. ಅಕ್ರಮ ಪತ್ತೆಯಾದರೆ ಮೊದಲ ಹಂತದಲ್ಲಿ 6 ತಿಂಗಳು ಕಾರ್ಡ್ ಅಮಾನತ್ತು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.