ನ್ಯೂಸ್ ನಾಟೌಟ್: ಯುಕೆಜಿಯಲ್ಲಿ ಓದುತ್ತಿದ್ದ 7 ವರ್ಷದ ಬಾಲಕಿಯೊಬ್ಬಳು ಕ್ಲಾಸ್ರೂಮ್ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹ್ನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಎಲ್ಕೆಜಿ ಓದುತ್ತಿದ್ದ ಈ ಬಾಲಕಿಗೆ ಕ್ಲಾಸ್ರೂಮ್ನಲ್ಲಿದ್ದಾಗಲೇ ಉಸಿರಾಡಲು ಕಷ್ಟವಾಗಿದ್ದು, ಚಡಪಡಿಸಲು ಆರಂಭಿಸಿದ್ದಾಳೆ. ಎದೆ ನೋವಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಇದಾಗಿ ಸ್ವಲ್ಪ ಹೊತ್ತಿನಲ್ಲೇ ಬಾಲಕಿ ಕುಸಿದು ಬಿದ್ದಿದ್ದಾಳೆ.
ಈ ವೇಳೆ ಕ್ಲಾಸ್ನಲ್ಲಿದ್ದ ಶಿಕ್ಷಕರು ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಾಲಕಿಯ ಪೋಷಕರು ಬಂದಿದ್ದು, ಬಾಲಕಿ ಪೋಷಕರೆದುರೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆದೊಯ್ದ ನಂತರ ಬಾಲಕಿಯ ಆರೋಗ್ಯ ಕ್ಷೀಣಿಸುತ್ತಾ ಬಂದಿದ್ದು, ಆಕೆಯನ್ನು ಅಲ್ಲಿಂದ ಗಜ್ರೌಲ್ನಲ್ಲಿರುವ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿನ ವೈದ್ಯರು ಬಾಲಕಿಯ ತಪಾಸಣೆ ಮಾಡಿ ಬಾಲಕಿ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಮಾಹಿತಿ ಪಡೆದುಕೊಂಡಿದೆ.
Click