- +91 73497 60202
- [email protected]
- November 22, 2024 2:54 PM
ನ್ಯೂಸ್ ನಾಟೌಟ್ : ವೈದ್ಯೆ ವಿದ್ಯಾರ್ಥಿನಿಯ ಹತ್ಯೆ ಮತ್ತು ಅತ್ಯಾಚಾರದ ಕುರಿತು ಮಾತನಾಡುವಾಗ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿನಿಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿರುವ ಆರೋಪ ವಿದ್ಯಾರ್ಥಿನಿಯ ಮೇಲಿದೆ. ‘ಕೀರ್ತಿ ಸೋಶಿಯಲ್’ ಎಂಬ ಇನ್‌ಸ್ಟಾಗ್ರಾಮ್ ಪುಟದಲ್ಲಿ ವಿದ್ಯಾರ್ಥಿನಿ ಪೋಸ್ಟ್ ಹಾಕಿದ್ದರು. ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯನ್ನು ಉಲ್ಲೇಖಿಸಿದ ಕೀರ್ತಿ ಶರ್ಮಾ ಮಮತಾ ಬ್ಯಾನರ್ಜಿಯವರನ್ನೂ ಅದೇ ರೀತಿಯಲ್ಲಿ ಕೊಲ್ಲುವ ಬಗ್ಗೆ ಮಾತನಾಡಿದ್ದಾರೆ. ಇನ್ನು ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಸಂರಕ್ಷಣೆಗೆ ಆಗ್ರಹಿಸಿ ಆರೋಗ್ಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿರಾ ಗಾಂಧಿಯವರಂತೆ ಮಮತಾ ಬ್ಯಾನರ್ಜಿ ಅವರನ್ನು ಶೂಟ್ ಮಾಡಿ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಈ ಕುರಿತು ಪೊಲೀಸರು ಕ್ರಮ ಕೈಗೊಂಡು ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ