ನ್ಯೂಸ್ ನಾಟೌಟ್ : ವಕೀಲ ಜಗದೀಶ್ ಮಹದೇವ್ ಬಿಜೆಪಿಯ ಮಾಜಿ ಸಿಎಂ ಒಬ್ಬರ ವಿಡಿಯೋ ಕೋರ್ಟ್ ಗೆ ನೀಡುತ್ತೇನೆ ಎಂದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ ಕೋರ್ಟ್, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ.
ಓರ್ವ ವ್ಯಕ್ತಿಯ ಚಾರಿತ್ರ್ಯ ವಧೆ, ಮಾನಹಾನಿಯಾಗುವಂತೆ ಯಾರಾದರು ಹೇಳಿಕೆ, ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ. ಅದನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರ್ಟ್ನಿಂದ ನಿರ್ಬಂಧಕಾಜ್ಞೆ ತರುವುದು ಮಾಮೂಲಿಯಾಗಿದೆ. ಆದ್ರೆ, ಇದೀಗ ಬಸವರಾಜ ಬೊಮ್ಮಾಯಿ ಅವರು ಇದೀಗ ಏಕೆ ಏಕಾಎಕಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಈ ಬಗ್ಗೆ ವಕೀಲ ಜಗದೀಶ್ ಮಾತನಾಡಿದ್ದು, ಅಲ್ಲದೆ ಬೊಮ್ಮಾಯಿ ವಿರುದ್ಧ ಏನಾದರೂ ಆರೋಪಗಳು ಇದ್ದಾವೆಯೇ? ಯಾರಾದರೂ ಅವುಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರಾ? ಹೀಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Click