ನ್ಯೂಸ್ ನಾಟೌಟ್: ಮಹಾರಾಷ್ಟ್ರದ ಅಕೋಲಾದಲ್ಲಿ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಅಶ್ಲೀಲ ವಿಡಿಯೋ ತೋರಿಸುತ್ತಿದ್ದು, ಇದೀಗ ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿಕ್ಷಕನ ಈ ವಿಕೃತಿಗೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸುಮಾರು ನಾಲ್ಕು ತಿಂಗಳಿಂದ ಶಿಕ್ಷಕ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಬೇಸತ್ತ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಮಂಗಳವಾರ(ಆ.20) ಬೆಳಗ್ಗೆ ದೂರಿನ ಆಧಾರದ ಮೇಲೆ ಮಕ್ಕಳ ಕಲ್ಯಾಣ ಸಮಿತಿ ತಂಡ ಶಾಲೆಗೆ ಆಗಮಿಸಿ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ, ತಮ್ಮ ಶಾಲೆಯ ಶಿಕ್ಷಕನೊಬ್ಬ ಕಳೆದ ನಾಲ್ಕು ತಿಂಗಳಿಂದ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದಾರೆ ಎಂದು 6 ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಅಕೋಲಾದ ಕಾಜಿಖೇಡ್ನಲ್ಲಿರುವ ಜಿಲ್ಲಾ ಪರಿಷತ್ ಶಾಲೆಯಲ್ಲಿ ನಡೆದಿದೆ. ಇಲ್ಲಿನ 47 ವರ್ಷದ ಶಿಕ್ಷಕನೊಬ್ಬ ನಾಲ್ಕು ತಿಂಗಳ ಕಾಲ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸುತ್ತಿದ್ದ. ವಿದ್ಯಾರ್ಥಿನಿಯರಿಗೆ ಬಲವಂತವಾಗಿ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ.
Click