ಕಾರ್ಕಳ: ರೇಪ್ ಕೇಸ್ ಬಗ್ಗೆ ಉಡುಪಿ ಎಸ್‌ ಪಿ ಹೇಳಿದ್ದೇನು..? ಆಸ್ಪತ್ರೆಯಲ್ಲಿರುವ ಸಂತ್ರಸ್ತೆಯಿಂದ ಹೇಳಿಕೆ ದಾಖಲು..!

ನ್ಯೂಸ್ ನಾಟೌಟ್: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.ವಿಡಿಯೋದಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಅವರು, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರಗೈದ ದೂರು ಬಂದಿದೆ ಎಂದು ತಿಳಿಸಿದ್ದಾರೆ.ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ(ಆ.23) ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ಈ ನಡುವೆ ಮದ್ಯದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಹಿಂದೂ ಸಂಘಟನೆಗಳು ಇದು ಕೇವಲ ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿವೆ. Click