ನ್ಯೂಸ್ ನಾಟೌಟ್: ವಕೀಲ ಜಗದೀಶ್ ಮಹದೇವ್ ಬಿಜೆಪಿಯ ಮಾಜಿ ಸಿಎಂ ಒಬ್ಬರ ವಿಡಿಯೋ ಕೋರ್ಟ್ ಗೆ ನೀಡುತ್ತೇನೆ ಎಂದ ಹೇಳಿಕೆ ಸಂಚಲನ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್ಟ್ ಮೆಟ್ಟಿಲೇರಿದ್ದರು.
ಈಗ ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ(ಆ.29) ಬಂಧಿಸಿದ್ದಾರೆ.
ಜಗದೀಶ್ ವಿರುದ್ಧ 2022 ರಲ್ಲಿ ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಜಗದೀಶ್ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿತ್ತು.
ಈ ನಡುವೆ ಜಗದೀಶ್ ಗೋವಾದಲ್ಲಿರುವ ಮಾಹಿತಿ ಪಡೆದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ ಎನ್ನಲಾಗಿದೆ.
Click