- +91 73497 60202
- [email protected]
- November 22, 2024 8:49 AM
ಕಾನೂನು ಹೋರಾಟದಲ್ಲಿ ವಿನೇಶ್ ಫೋಗಟ್ ಗೆ ಸೋಲು..! ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ..!
ನ್ಯೂಸ್ ನಾಟೌಟ್: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat)ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಗೆ ಬಂದು ಅನರ್ಹಗೊಂಡಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿದೆ. ನಿಗದಿಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದಕ್ಕೆ ಫೋಗಟ್ ಅವರನ್ನು ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ. ವಿಭಾಗದ ಫೈನಲ್‌ನಿಂದ ಅನರ್ಹಗೊಳಿಸಲಾಗಿತ್ತು. ಕ್ರೀಡಾಕೂಟದ ಸಂದರ್ಭದಲ್ಲಿ ವಿವಾದ ಪರಿಹಾರಕ್ಕಾಗಿ ವಿಶೇಷವಾಗಿ ಸ್ಥಾಪಿಸಲಾಗಿರುವ ಸಿಎಎಸ್‌ನ ತಾತ್ಕಾಲಿಕ ವಿಭಾಗಕ್ಕೆ ತಮ್ಮ ವಿರುದ್ಧದ ಕ್ರಮ ಪ್ರಶ್ನಿಸಿ ವಿನೇಶ್ ಆ.9 ರಂದು ಮೇಲ್ಮನವಿ ಸಲ್ಲಿಸಿದ್ದರು. ಮನವಿಯನ್ನು ಆಲಿಸಿದ ಸಿಎಎಸ್ ಆರಂಭದಲ್ಲಿ ಆ.10 ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ನಂತರ ಆ.13 ರಂದು ಪ್ರಕಟಿಸಲಾಗುವುದು ಎಂದಿತ್ತು. ಮಂಗಳವಾರ ತೀರ್ಪನ್ನು ಮೂರನೇ ಬಾರಿ ಮುಂದೂಡಿದ್ದು, ಆ.16 ರಂದು ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಈಗ ಅರ್ಜಿ ವಜಾಗೊಂಡಿದೆ ಎನ್ನಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ