ನ್ಯೂಸ್ ನಾಟೌಟ್ : ಸುಳ್ಯದ ಮಂಡೆಕೋಲು ಬಳಿಯಲ್ಲಿ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದವರನ್ನು ಪುರುಷೋತ್ತಮ ಎಂದು ಗುರುತಿಸಲಾಗಿದೆ. 53 ವರ್ಷದ ಪುರುಷೋತ್ತಮ ಅವರು ವೈಯಕ್ತಿಕ ಕಾರಣಗಳಿಂದ ಕೃತ್ಯ ಎಸಗಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವಿಷ ಕುಡಿದ ವಿಚಾರ ಮನೆಯವರಿಗೆ ಗೊತ್ತಾಗುತ್ತಿದ್ದಂತೆ ತಕ್ಷಣ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.