- +91 73497 60202
- [email protected]
- November 22, 2024 2:08 PM
ನ್ಯೂಸ್ ನಾಟೌಟ್: ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ (Ivan D’Souza)ಅವರ ಮಂಗಳೂರಿನ ವೆಲೆನ್ಸಿಯಾದ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ನಡೆದಿದೆ ಎಂದು ವರದಿ ತಿಳಿದಿದೆ. ಬುಧವಾರ(ಆ.22) ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್ ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಹಾನಿಯಾಗಿವೆ. ಹೊರಗೆ ಹೋಗಿದ್ದ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಅವರು ಮನೆ ಬಳಿ ಕಾರು ಪಾರ್ಕ್ ಮಾಡಿ ಒಳಗೆ ಹೋದ ಐದು ನಿಮಿಷದಲ್ಲೇ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.ಇನ್ನು ಈ ಘಟನೆ ನಡೆಯುವಾಗ ಐವನ್ ಡಿಸೋಜಾ ಅವರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಸದ್ಯ ಐವನ್ ಡಿಸೋಜಾ ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ