- +91 73497 60202
- [email protected]
- November 22, 2024 1:10 PM
ಅಕ್ಕ ಮತ್ತು ತಮ್ಮ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ..! ಅಮ್ಮನ ಅಗಲುವಿಕೆ ಅನಾಹುತಕ್ಕೆ ಕಾರಣವಾಯ್ತಾ..?
ನ್ಯೂಸ್ ನಾಟೌಟ್: ಅಕ್ಕ-ತಮ್ಮ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ಇಂದು(ಆ.2) ಬೆಳಗ್ಗೆ ಬೆಳಕಿಗೆ ಬಂದಿದೆ. ಶಿಡ್ಲಘಟ್ಟ ಟೌನ್ ನ ಪ್ರೇಮ ನಗರದ ನಿವಾಸಿಗಳಾದ ಶಿಲ್ಪಾ (23) ಹಾಗೂ ಪ್ರಭು (20) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಇವರ ಮೃತದೇಹಗಳು ಇಂದು ಬೆಳಗ್ಗೆ ರೈಲು ಹಳಿಗಳ ಮೇಲೆ ಪತ್ತೆಯಾಗಿದ್ದು, ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಇವರ ತಾಯಿ ಲಲಿತಮ್ಮ ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದು, ತಾಯಿಯ ಅಗಲುವಿಕೆಯಿಂದ ಖಿನ್ನತೆಗೆ ಒಳಗಾಗಿ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ