ನ್ಯೂಸ್ ನಾಟೌಟ್: ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಶನ್ಗೆ ರಾಜ್ಯಪಾಲರು ಅನುಮತಿ ನೀಡಿದ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ. ನಾನು ಕಾನೂನು ಹೋರಾಟ ಮಾಡುತ್ತೇವೆ. ಹೈಕಮಾಂಡ್, ಪಕ್ಷ, ಶಾಸಕರು ಎಲ್ಲರೂ ನನ್ನ ಜೊತೆ ಇದ್ದಾರೆ. ನಾನು ರಾಜೀನಾಮೆ ಕೊಡುವ ತಪ್ಪು ಮಾಡಿಲ್ಲ. ಅವರು ಕಾನೂನುಬಾಹಿರ ಅಂದಿದ್ದಾರೆ. ರಾಜ್ಯಪಾಲರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಯಾವಾಗ ರಾಜ್ಯಪಾಲರು 26 ರಂದು ಶೋಕಾಸ್ ನೋಟಿಸ್ ಕೊಟ್ಟಿದ್ದರೋ ಆವಾಗಲೇ ನಿರೀಕ್ಷೆ ಇತ್ತು. ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮೇಲೆ ನವೆಂಬರ್ ತಿಂಗಳಲ್ಲೇ ಪಿಟಿಷನ್ ಸಲ್ಲಿಕೆಯಾಗಿದೆ. ಶಿಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಮೇಲೆಯೂ ಇದೆ. ನನಗೆ ಮಾತ್ರ ಶೋಕಾಸ್ ನೋಟಿಸ್ ಕಳುಹಿಸಿದ್ದಾರೆ. ನನಗೆ ಮಾತ್ರ ನೋಟಿಸ್ ಕೊಟ್ಟಿದ್ದಾರೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಅನೇಕ ರಾಜ್ಯಗಳಲ್ಲಿ ಇದೇ ರೀತಿ ಮಾಡಿದ್ದಾರೆ. ದೆಹಲಿ, ಜಾರ್ಖಾಂಡ್ನಲ್ಲಿ ಕೂಡ ಇದೆ ರೀತಿ ಆಗಿದೆ. ಬಿಜೆಪಿ, ಜೆಡಿಎಸ್ ಎಲ್ಲ ಸೇರಿಕೊಂಡಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ರಾಜ್ಯಪಾಲರ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಿದ್ದಂತೆಯೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕಾನೂನು ತಜ್ಞರು, ಸಚಿವರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.