ನ್ಯೂಸ್ ನಾಟೌಟ್: ರಾಜ್ಯ ಸರ್ಕಾರ ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara) ದಿನಾಂಕ ಘೋಷಣೆ ಮಾಡಿದೆ. ಇದೇ ಅಕ್ಟೋಬರ್.3 ರಿಂದ ಅ.12 ರ ವರೆಗೆ ಮೈಸೂರು ದಸರಾ ಮಹೋತ್ಸವ ಜರುಗಲಿದೆ.
ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾಗಲಿದ್ದು, ಅ.12 ರಂದು ಜಂಬೂಸವಾರಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲು ಸಭೆ ನನಗೆ ಸರ್ವಾನುಮತದಿಂದ ಅನುಮತಿ ನೀಡಿದೆ. 3-4 ದಿನಗಳಲ್ಲಿ ನಾನು ಯಾರು ಅಂತಾ ಘೋಷಣೆ ಮಾಡ್ತೀನಿ. ಈ ಬಾರಿ ದಸರಾವನ್ನ ವಿಜೃಂಭಣೆಯಿಂದ, ಆಕರ್ಷಣೆಯಾಗಿ, ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆ ಆಗಿದೆ. ರೈತರು ಹರ್ಷದಿಂದ ಇದ್ದಾರೆ. ಬೆಳೆ ಚೆನ್ನಾಗಿ ಬರ್ತಿದೆ. ಎಲ್ಲಾ ಜಲಾಶಯಗಳು ತುಂಬಿವೆ. ಕಳೆದ ವರ್ಷ ಬರ ಇತ್ತು. ಹೀಗಾಗಿ ಸರಳವಾಗಿ ಆಚರಣೆ ಮಾಡಿದ್ವಿ. ಈ ಬಾರಿ ವಿಜೃಂಭಣೆಯಿಂದ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದರು.
ದೀಪಾಲಂಕಾರ ಈ ಬಾರಿ 21 ದಿನಗಳ ಕಾಲ ಇರಲಿದೆ. ಜಂಬೂಸವಾರಿ ಮುಗಿದ ಬಳಿಕವೂ 11 ದಿನ ದೀಪಾಲಂಕಾರ ಇರಲಿದೆ ಎಂದಿದ್ದಾರೆ.
Click