- +91 73497 60202
- [email protected]
- November 23, 2024 5:40 AM
ನ್ಯೂಸ್ ನಾಟೌಟ್: ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಗೆ ಕಾನೂನು ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 40.20 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ ಎಂದು ವರದಿ ತಿಳಿಸಿದೆ. ‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು, ಈಗ ತೀರ್ಪು ಪ್ರಕಟಗೊಂಡಿದೆ. ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದರು. ನಾನು ಸಾಲವನ್ನೇ ಪಡೆದಿಲ್ಲ ಎಂದಿದ್ದ ಅವರು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್ನ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಆದರೆ, ಇದಕ್ಕೆ ಸಂಬಂಧಿಸಿ ಅವರು ಕೋರ್ಟ್ನಲ್ಲಿ ಸಾಕ್ಷಿಗಳನ್ನು ಒದಗಿಸಲು ವಿಫಲರಾಗಿದ್ದಾರೆ. ಆದರೆ ಇದೀಗ, ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ 3 ತಿಂಗಳು ಕಾರಗೃಹ ಶಿಕ್ಷೆ ಅನುಭವಿಸಬೇಕಿದೆ. ಸದ್ಯ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯನ ಅತ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ