ನ್ಯೂಸ್ ನಾಟೌಟ್: ಬ್ರೇಕ್ ವೈಫಲ್ಯಗೊಂಡ ಸಿಟಿ ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ನಿವೃತ್ತ ಮುಖ್ಯೋಪಾಧ್ಯಾಯ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು(ಆ.01) ಮಧ್ಯಾಹ್ನ ಉಡುಪಿಯ ಕಲ್ಮಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ. ಆದಿಉಡುಪಿ ಕಡೆಯಿಂದ ಮಲ್ಪೆ ಕಡೆ ಹೋಗುತ್ತಿದ್ದ ಬಸ್ ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಸ್ಕೂಟರ್ ಸವಾರ ಬಸ್ಸಿನ ಚಕ್ರದಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Click