- +91 73497 60202
- [email protected]
- November 22, 2024 12:34 PM
ನ್ಯೂಸ್ ನಾಟೌಟ್: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣಕ್ಕೆ (Pen Drive Case) ಸ್ಫೋಟಕ ತಿರುವು ಸಿಕ್ಕಿದೆ. ಪೆನ್‌ಡ್ರೈವ್‌ನಲ್ಲಿ ಇರುವ ಅಶ್ಲೀಲ ವಿಡಿಯೋಗಳು ಅಸಲಿ ಎನ್ನುವುದು ನೂರಾರು ವಿಡಿಯೋಗಳ ಪರೀಕ್ಷೆಯ ಬಳಿಕ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ(FSL Report) ದೃಢಪಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆದ ಬೆನ್ನಲ್ಲೇ ಎಸ್‌ಐಟಿ ಎಲ್ಲಾ ವಿಡಿಯೋಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿತ್ತು. ಈಗ ಪೊಲೀಸರ ಕೈಗೆ ಎಫ್‌ಎಸ್‌ಎಲ್ ವರದಿ ಸೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋಗಳು ಅಸಲಿಯಾಗಿದೆ. ಈ ವಿಡಿಯೋಗಳನ್ನು ಎಡಿಟಿಂಗ್ ಅಥವಾ ಮಾರ್ಫಿಂಗ್ ಮಾಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. ವಿಡಿಯೋಗಳು ಅಸಲಿಯಾಗಿದ್ದರೂ ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎನ್ನುವುದು ಸಾಬೀತಾಗಿಲ್ಲ. ಅಶ್ಲೀಲ ವಿಡಿಯೋದಲ್ಲಿರುವ ಪುರುಷನ ಮುಖ ಪ್ರದರ್ಶನವಾಗಿಲ್ಲ. ಹೀಗಾಗಿ ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧನಕ್ಕೆ ಒಳಗಾಗಿರುವ ವ್ಯಕ್ತಿಗೂ ಹೋಲಿಕೆ ಮಾಡಿ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಎಸ್‌ಐಟಿಯ ಮತ್ತೆ ಸ್ಪಷ್ಟನೆ ಕೇಳಿದ್ದು ಎಫ್‌ಎಸ್‌ಎಲ್ ಉತ್ತರ ನೀಡಿದ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಮುಂದಾಗಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ