ಪುತ್ತೂರು: ಸ್ಕೂಟರ್ ಸವಾರನ ಮೇಲೆ ಕಾಡು ಹಂದಿ ದಾಳಿ..! ಯುವಕ ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮಂಗಳವಾರ(ಆ.20) ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಧನುಷ್(30) ಗಾಯಗೊಂಡವರು ಎಂದು ಗುರುತಿಸಲಾಗಿದೆ. ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು(ಆ.20) ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ಎರಗಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಕಾಡು ಹಂದಿ ಮತ್ತೆ ದಾಳಿ ನಡೆಸಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಚಿಕಿತ್ಸೆ ಪಡೆಯುತ್ತಿದ್ದಾರೆ. Click