ನ್ಯೂಸ್ ನಾಟೌಟ್: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಜಮಾಬಂಧಿ ಕಾರ್ಯಕ್ರಮ ಸಂಪನ್ನಗೊಂಡಿದೆ. ಜಮಾಬಂಧಿ ಅಧಿಕಾರಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಎಂ.ಪಿ. ಜ್ಞಾನೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗ್ರಾಮದ ಆದಾಯ ಮೂಲ ಸಂಪನ್ಮೂಲ ಕ್ರೂಢೀಕರಿಸುವ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು, ಹಾಲಿ ಉಪಾಧ್ಯಕ್ಷರಾದ ಎಸ್ . ಕೆ. ಹನೀಫ್ , ಮಾಜಿ ಅಧ್ಯಕ್ಷರಾದ ಜಿ.ಕೆ. ಹಮೀದ್, ಟಿ.ಎಂ. ಶಾಹಿದ್ ತೆಕ್ಕಿಲ್, ಜಿಲ್ಲಾ ಪಂಚಾಯತ್ ಇಂಜಿನೀಯರ್ ಮಣಿಕಂಠ, ಸದಸ್ಯರಾದ ಜಗದೀಶ್ ರೈ, ಸುಂದರಿ ಮುಂಡಡ್ಕ, ಶೌವಾದ್ , ಅಬೂಸಾಲಿ, ವಿಮಲ ಪ್ರಸಾದ್, ಲಿಸ್ಸಿ ಮೊನಾಲಿಸಾ,ಅನುಪಮಾ,ರಜನಿ ಶರತ್ ಮಾಜಿ ಸದಸ್ಯರಾದ ನಾಗೇಶ್,ಸೊಸೈಟಿ ನಿರ್ದೇಶಕ ಎಚ್.ಹಮೀದ್ , ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಕಲ್ಲುಗುಂಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್.ಎಂ.ಎಸ್.ಪ್ರೌಢಶಾಲೆ ಗೆ ಎಂ.ಪಿ. ಜ್ಞಾನೇಶ್ ಭೇಟಿ ನೀಡಿದರು. ಬಿಸಿಯೂಟ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಜೊತೆಗೆ ಬಿಸಿಯೂಟದಲ್ಲಿ ತರಕಾರಿಯಲ್ಲಿ ಯಾವ ಅರೋಗ್ಯ ಕ್ಕೆ ಪೂರಕವಾದ ಅಂಶಗಳಿವೆ ಎಂಬ ಪ್ರಶ್ನೆ ಕೇಳಿದರು. ಮಕ್ಕಳ ಪೌಷ್ಟಿಕ ಆಹಾರ.ಬಿಸಿಯೂಟ ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ. ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಉಪಾಧ್ಯಕ್ಷ ಎಸ್.ಕೆ.ಹನೀಫ್, ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಮಣಿಕಂಠ ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ,ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹನೀಫ್ ಚಟ್ಟೆಕಲ್ಲು, ಶಾಲಾ ಮುಕ್ಯೋಪಾಧ್ಯಾಯರು.ಅಧ್ಯಾಪಕರು ಉಪಸ್ಥಿತರಿದ್ದರು.
Click