- +91 73497 60202
- [email protected]
- November 22, 2024 1:40 PM
ನ್ಯೂಸ್ ನಾಟೌಟ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್ ಬಂದ್‌ಗೆ ನಿನ್ನೆ(ಆ.21)ಕರೆ ನೀಡಿದ್ದವು. ಭಾರತ್ ಬಂದ್ (Bharat Bandh) ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಬಿಹಾರದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲು ಹಳಿಗಳಲ್ಲಿ ಕುಳಿತು ಪ್ರತಿಭಟಿಸಿದ್ದರಿಂದ ಕೆಲವೆಡೆ ರಸ್ತೆ ಮತ್ತು ರೈಲು ಸಂಚಾರದಲ್ಲಿ ಸಮಸ್ಯೆಯಾಗಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದವು. ಬಂದ್ ವೇಳೆ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮಕ್ಕಳಿದ್ದ ಶಾಲಾ ಬಸ್ ರಸ್ತೆಯಲ್ಲಿ ಬಂದಿದೆ.ಶಾಲಾ ಬಸ್ಸನ್ನು ನೋಡಿದ ಕೂಡಲೇ ಸುತ್ತುವರೆದ ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಬೆಂಕಿಯನ್ನು ತೆಗೆದಿದ್ದಾರೆ. ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ