ನ್ಯೂಸ್ ನಾಟೌಟ್: ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ವರದಿ ತಿಳಿಸಿದೆ.(Shikhar Dhawan)
38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ. ವೃತ್ತಿ ಜೀವನದುದ್ದಕ್ಕೂ ಅವರಿಗೆ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು ಸೇರಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಸೇರಿದ ನಂತರ ಇಡೀ ತಂಡ, ಕುಟುಂಬ, ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಈಗ ವಿದಾಯ ಹೇಳುವ ಸಮಯ ಬಂದಿದೆ ಎಂದಿದ್ದಾರೆ.
ನನ್ನ ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCI) ಮತ್ತು ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು. ಶಿಖರ್ ಧವನ್ ಎಡಗೈ ಆಟಗಾರರಾಗಿ ಹಲವು ಬಾರಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. 2010 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಏಕದಿನಕ್ಕೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಶಿಖರ್ ಧವನ್ 2021ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು.
167 ಏಕದಿನ ಪಂದ್ಯಗಳ 164 ಇನ್ನಿಂಗ್ಸ್ನಿಂದ 6,793 ರನ್ ಹೊಡೆದಿರುವ ಶಿಖರ್ ಧವನ್ 34 ಟೆಸ್ಟ್ ಪಂದ್ಯಗಳ 58 ಇನ್ನಿಂಗ್ಸ್ನಿಂದ 2,315 ರನ್ ಗಳಿಸಿದ್ದಾರೆ. 68 ಟಿ20 ಪಂದ್ಯಗಳಿಂದ 1,759 ರನ್ ಹೊಡೆದಿದ್ದಾರೆ.