ಶಿರಾಡಿಘಾಟ್‌ ನಲ್ಲಿ ಮತ್ತೆ ಗುಡ್ಡ ಕುಸಿತ..! ತೆರವಾಗಿದ್ದ ರಸ್ತೆ ಮತ್ತೆ ಬಂದ್, ಮಣ್ಣಿನಡಿ ಸಿಲುಕಿದ ಕಂಟೇನರ್..!

ನ್ಯೂಸ್ ನಾಟೌಟ್: ಗುಡ್ಡ ಕುಸಿತದ ತೆರವು ಕಾರ್ಯ ನಡೆಯುತ್ತಿದ್ದಂತೆ, ಶಿರಾಡಿಘಾಟ್‌ನಲ್ಲಿ (Shiradi Ghat) ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮ ಕೆಲವೇ ನಿಮಿಷಗಳ ಹಿಂದೆಯಷ್ಟೇ ತೆರವಾಗಿದ್ದ ರಸ್ತೆ ಮತ್ತೆ ಬಂದ್‌ ಆಗಿದೆ. ಶಿರಾಡಿಘಾಟ್‌ನ ದೊಡ್ಡತಪ್ಲು ಬಳಿ ಗುರುವಾರ (ಆ.1) ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ. Click