ನ್ಯೂಸ್ ನಾಟೌಟ್: ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್ನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಪೊಲೀಸರು ನೀಡಿದ್ದಾರೆ.
ಆಂಧ್ರಪ್ರದೇಶದ ಕೃಷ್ಣನ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಸಂಬಂಧ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಶ್ರೂಮ್ನಲ್ಲಿರುವ ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಫೋಟೋಗಳು ಮತ್ತು ವಿಡಿಯೋಗಳು ಸೋರಿಕೆಯಾಗಿದ್ದು, ಹಣ ಕೊಟ್ಟು ಕೆಲವು ವಿದ್ಯಾರ್ಥಿಗಳು ಆರೋಪಿ ವಿಜಯ್ನಿಂದ ವೀಡಿಯೊಗಳನ್ನು ಖರೀದಿಸಿದ್ದಾರೆ ಎನ್ನಲಾಗಿದೆ.
ಗುರುವಾರ(ಆ.29) ಸಂಜೆ ವಾಶ್ರೂಮ್ನಲ್ಲಿ ಮುಚ್ಚಿಟ್ಟಿದ್ದ ವಸ್ತುವನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ಆ ವಸ್ತುವನ್ನು ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳು ಕಂಡಿವೆ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
Click