ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸ್ವಾತಂತ್ರ್ಯದ ಮಹತ್ವ ಮತ್ತು ಪ್ರಜಾಪ್ರಭುತ್ವದಿಂದಾಗಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದು ಈಗ ಜಗತ್ತಿನಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು.
ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಭಾರತಿ ಸ್ವಾಗತಿಸಿ, ಕಾಲೇಜು ವಿಭಾಗದ ಪ್ರಾಂಶುಪಾಲೆ ದಯಾಮಣಿ ಕೆ. ರವರು ವಂದಿಸಿದರು. ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.