ನ್ಯೂಸ್ ನಾಟೌಟ್: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಹೆತ್ತವರ – ಶಿಕ್ಷಕರ ಪ್ರಥಮ ಹಂತದ ಸಭೆ ನಡೆಯಿತು. ಮುಖ್ಯ ಅತಿಥಿ, ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲ್ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಮತ್ತು ಕಲಿಕಾ ಪ್ರಗತಿಗೆಯಲ್ಲಿ ಶಿಕ್ಷಕರ-ಪೋಷಕರ ಜವಾಬ್ದಾರಿ ಅತೀ ಅಗತ್ಯ ಎಂದರು.
ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ. ರೈ ಅಧ್ಯಕ್ಷತೆ ವಹಿಸಿದ್ದರು. ಭೌತ ಶಾಸ್ತ್ರ ಉಪನ್ಯಾಸಕಿ ರಾಧಿಕಾ ಕೆ.ಆರ್. ಸ್ವಾಗತಿಸಿ, ರಾಜ್ಯ ಶಾಸ್ತ್ರ ಉಪನ್ಯಾಸಕಿ ಗೀತಾ ಎನ್. ವಂದಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿ, ಪೋಷಕರೊಂದಿಗೆ ಸಂವಾದ ನಡೆಯಿತು. ಪೋಷಕರು ಹಲವು ಮಹತ್ವದ ಸಲಹೆಗಳನ್ನು ನೀಡಿದರು.