ನ್ಯೂಸ್ ನಾಟೌಟ್: ಕೇರಳದ ವಯನಾಡು (Wayanad Landslide) ಈಗ ಸ್ಮಶಾನದಂತಾಗಿದ್ದು, ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300 ಕ್ಕೆ ಏರಿಕೆಯಾಗಿದೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ 240 ಮಂದಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ.
ಅವರ ಪತ್ತೆಗೆ ಪ್ರತಿಕೂಲ ಹವಾಮಾನದ ನಡುವೆಯೂ ಸೇನೆ ಮತ್ತು ಎನ್ಡಿಆರ್ಎಫ್ (NDRF) ಅವಿರತವಾಗಿ ಶ್ರಮಿಸುತ್ತಿವೆ. 10ಕ್ಕೂ ಹೆಚ್ಚು ಜೆಸಿಬಿ ಬಳಸಿ ಕೆಸರು ಮಣ್ಣು, ಕಲ್ಲುಗಳನ್ನು ತೆರವು ಮಾಡಲಾಗುತ್ತಿದೆ. ಶ್ವಾನಗಳನ್ನು (Dog) ಬಳಸಿ ಶೋಧ ಕಾರ್ಯ ನಡೆಯುತ್ತಿದೆ. ಜೆಸಿಬಿಯನ್ನು ನದಿಗೂ ಇಳಿಸಲಾಗಿದೆ. ಚಲಿಯಾರ್ ನದಿ ಪ್ರವಾಹ ಸ್ವಲ್ಪಮಟ್ಟಿಗೆ ಕಡಿಮೆ ಆಗಿದ್ದು ಮಂಗಳವಾರ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಮತ್ತೆ ಬಳಕೆಗೆ ಲಭ್ಯವಾಗಿದೆ. ರಕ್ಷಣಾ ತಂಡಗಳು ರಾತ್ರೋರಾತ್ರಿ ನದಿಗೆ ಅಡ್ಡಲಾಗಿ 2 ಕಬ್ಬಿಣದ ಸೇತುವೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸಿದೆ. ಇದನ್ನು ಬಳಸಿ ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಈ ಕಾರ್ಯಾಚರಣೆ ಸದ್ಯಕ್ಕೆ ಮುಗಿಯುವುದು ಅನುಮಾನವಾಗಿದೆ. ಕನಿಷ್ಠ 15 ದಿನ ಈ ಕಾರ್ಯಾಚರಣೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ದುರಂತ ನಡೆದ ಸ್ಥಳಕ್ಕೆ ಸಿಎಂ ಪಿಣರಾಯ್ ವಿಜಯನ್ (Pinarayi Vijayan), ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
Click