ನ್ಯೂಸ್ ನಾಟೌಟ್: ಮಹಾರಾಷ್ಟ್ರದ ಬದ್ಲಾಪುರದ ನರ್ಸರಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಮಹಿಳಾ ಸುರಕ್ಷತೆ ಬಗ್ಗೆ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಹಾಸ್ಟೆಲ್, ವಾಶ್ ರೂಂ ಇತರ ಕಡೆಗಳಲ್ಲಿ ಪ್ಯಾನಿಕ್ ಬಟನ್ (Panic Button) ಅಳವಡಿಸುವ ಕಾರ್ಯಕ್ಕೆ ಮುಂದಾಗಿದೆ.
ಸಿಸಿಟಿವಿ ಮಾದರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ಪ್ಯಾನಿಕ್ ಬಟನ್ ಅನ್ನು ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ಅಳವಡಿಸುವ ಕಾರ್ಯಕ್ಕೆ ಮುಂದಾಗಿದೆ ಮಹಾರಾಷ್ಟ್ರದ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ತಿಳಿಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ಬಿಎಂಟಿಸಿ ಬಸ್ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಸಚಿವಾಲಯವು ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ವರದಿಯ ಮುಂದಿನ ಕ್ರಮಕ್ಕಾಗಿ ಕೇಸರ್ಕರ್ ಅವರಿಗೆ ನೀಡಲಾಗಿದೆ.
Click