- +91 73497 60202
- [email protected]
- November 22, 2024 6:46 PM
9 ಅಕ್ರಮ ಮಸೀದಿಗಳು ನೆಲಸಮ..! 103 ಎಕರೆ ಸರ್ಕಾರಿ ಭೂಮಿಯ ಅತಿಕ್ರಮಣದ ವಿರುದ್ಧ ಕಾರ್ಯಾಚರಣೆ..!
ನ್ಯೂಸ್ ನಾಟೌಟ್: ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ ಭೂಮಿಯಲ್ಲಿ ಐವತ್ತಕ್ಕೂ ಹೆಚ್ಚು ಕಟ್ಟಡಗಳು ಮತ್ತು ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಎಲ್ಲಾ ಅತಿಕ್ರಮಣಗಳನ್ನೂ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. 1.5 ಕಿಮೀ ದೂರದಲ್ಲಿರುವ ಸೋಮನಾಥ ದೇವಾಲಯದ ಬಳಿ 103 ಎಕರೆ ಸರ್ಕಾರಿ ಭೂಮಿಯನ್ನು ಆಕ್ರಮಿಸಿಕೊಂಡಿರುವುದು ಪೊಲೀಸ್ ಮತ್ತು ಆಡಳಿತಾತ್ಮಕ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಈ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಭಾಗವಾಗಿ 45 ವಸತಿ ಕಟ್ಟಡಗಳ ಜೊತೆಗೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ಕೆಡವಲಾಯಿತು. ಸುಮಾರು 320 ಕೋಟಿ ಮೌಲ್ಯದ ಅಂದಾಜು 102 ಎಕರೆ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ