ನ್ಯೂಸ್ ನಾಟೌಟ್: ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಸಾರ್ವಜನಿಕ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸಿಎಂ ಸ್ಥಾನದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ನವೆಂಬರ್ನಲ್ಲಿ ದೆಹಲಿ ಚುನಾವಣೆ ನಡೆಸುವಂತೆ ಎಎಪಿ ಸಂಚಾಲಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ಕೇಜ್ರಿವಾಲ್, ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರ ಬಂದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ಜನರು ನಿರ್ಧರಿಸುವವರೆಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಇಂದಿನಿಂದ ಎರಡು ದಿನಗಳ ನಂತರ ನಾನು ರಾಜೀನಾಮೆ ನೀಡಲಿದ್ದೇನೆ, ಕೇಜ್ರಿವಾಲ್ ಪ್ರಾಮಾಣಿಕ ಎಂದು ಸಾರ್ವಜನಿಕರು ತೀರ್ಪು ನೀಡುವವರೆಗೂ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
Click