- +91 73497 60202
- [email protected]
- November 22, 2024 6:34 AM
ನ್ಯೂಸ್ ನಾಟೌಟ್: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್ ಅಡುಗೆ ಸಹಾಯಕರ ಹಾಜರಾತಿ ನೀಡಲು 15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ. ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತರ ಬಾಲಕರ ವಸತಿ ನಿಲಯದ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ. ಗ್ರೂಪ್ (ಡಿ) ಅಡುಗೆ ಸಹಾಯಕರ ಪ್ರತಿ ತಿಂಗಳ ಹಾಜರಾತಿ ನೀಡಲು 20 ಸಾವಿರ ಲಂಚದ ಬೇಡಿಕೆ ಇಡುತ್ತಿದ್ದುದಲ್ಲದೇ, ಲಂಚ ನೀಡದಿದ್ದರೆ ಹಾಜರಾತಿ ಮತ್ತು ಸಂಬಳ ಮಾಡಲ್ಲ ಎಂದು ಲಂಚಕ್ಕೆ ಕುಮ್ಮಕ್ಕು ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಇದರಿಂದ ಬೇಸತ್ತು ಅಡುಗೆ ಸಹಾಯಕರೊಬ್ಬರು ಲೋಕಾಯುಕ್ತರಿಗೆ ದೂರು ನೀಡಿದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಬಿಕೆ ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಬಸವರಾಜ್, ಸಿಬ್ಬಂದಿಗಳಾದ ಪ್ರದೀಪ್, ಫೈಮುದ್ದಿನ್, ರೇಣುಕಮ್ಮ, ಪೌಡಪ್ಪ, ಸಂತೋಷಮ್ಮ, ಗುಂಡಪ್ಪ ಕಾರ್ಯಚರಣೆ ನಡೆಸಿ ಲಂಚದ ಹಣ ಪಡೆಯುತ್ತಿದ್ದ ವಾರ್ಡನ್ ನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ