- +91 73497 60202
- [email protected]
- November 22, 2024 2:29 AM
ನ್ಯೂಸ್ ನಾಟೌಟ್: ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ (Bike Rally) ಪೊಲೀಸರು ಅನುಮತಿ ನೀಡಿದ ಬಳಿಕ ಬಂಟ್ವಾಳ (Bantwal) ತಾಲೂಕಿನ ಬಿ.ಸಿ ರೋಡ್‌ನಲ್ಲಿ ಮತ್ತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಜರಂಗದಳ ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ‍್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ‍್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್‌ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ