ನ್ಯೂಸ್ ನಾಟೌಟ್: ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ.
ಜೈನ ವರ್ಗದ ಜನರ ಮತ್ತು ಜೈನ ಸಮುದಾಯಗಳ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸಲು ಮತ್ತು ಅವಹೇಳನವನ್ನು ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಪೆನ್ಡ್ರೈವ್ ಇತರ ದಾಖಲೆ ಸಹಿತ ಠಾಣೆಗೆ ದೂರು ನೀಡಲಾಗಿದೆ.
ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ (55) ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಮಾಡಿ ಅವಾಚ್ಯ ಮತ್ತು ಕೀಳು ಶಬ್ದಗಳನ್ನು ಬಳಸಿದ್ದಾರೆ. ಯೂಟ್ಯೂಬ್ ಚಾನೆಲ್ಗಳಲ್ಲಿ ಇದರ ವೀಡಿಯೋಗಳು ಪ್ರಸಾರಗೊಂಡಿದ್ದು, ಆದುದರಿಂದ ಅವರ ವಿರುದ್ಧ ತತ್ಕ್ಷಣ ಕ್ರಮ ಕೈಗೊಳ್ಳಬೇಕು. ಧಾರ್ಮಿಕ ಸಮಾರಂಭದಲ್ಲಿ ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ ಟೀಕೆ ಮಾಡಿದ್ದಲ್ಲದೆ ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Click