ನ್ಯೂಸ್ ನಾಟೌಟ್: ಶಾಲಾ ವಾಹನವೊಂದು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ(ಸೆ.19) ನಡೆದಿದೆ.
ಕುಂದಾಪುರದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಹೆದ್ದಾರಿಯಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಇಬ್ಬರು ಕಾಲೇಜು ವಿದ್ಯಾರ್ಥಿನಿಯರಿಗೂ ಕೂಡಾ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯರು ತತ್ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Click