ನ್ಯೂಸ್ ನಾಟೌಟ್: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.
ಇಂದು(ಸೆ.17) ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದು ನಿಂತು ಅದನ್ನು ಒಪ್ಪಿಕೊಂಡರು. ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂದು ಮೂಲಗಳು ಹೇಳಿವೆ.
Click