ನ್ಯೂಸ್ ನಾಟೌಟ್: ಓರ್ವ ವಿದ್ಯಾರ್ಥಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳುವಲ್ಲಿ ಆತನ ಶಿಕ್ಷಕರ ಪಾತ್ರ ಮುಖ್ಯವಾದುದು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆಗೆ ಸಂಸ್ಕೃತಿ – ಸಂಸ್ಕಾರಯುತವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯವಿದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.
ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಆಯೋಜಿಸಿದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.
ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್. ಇದ್ದರು. ಶಿಕ್ಷಕಿ ಮೀನಕುಮಾರಿ ಸಂಪನ್ಮೂಲ ವ್ಯಕ್ತಿ ಅವರನ್ನು ಪರಿಚಯಿಸಿದರು. ಶಿಕ್ಷಕಿ ಸವಿತಾ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ ಕೆ. ಕಾರ್ಯಕ್ರಮ ನಿರೂಪಿಸಿದರು.