ನ್ಯೂಸ್ ನಾಟೌಟ್: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿರುವಂತಹ ಘಟನೆ ಚಿತ್ರದುರ್ಗದ ಗಾಂಧಿ ವೃತ್ತದ ಬಳಿ ನಡೆದಿದೆ.
ಮೆರವಣಿಗೆಯಲ್ಲಿ ಕೆಲವರಿಂದ ಪ್ಯಾಲೆಸ್ತೀನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಿದ ಪೊಲೀಸರು ಎರಡು ಧ್ವಜ ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಮುಂಜಾಗೃತೆ ಕ್ರಮವಾಗಿ ನಗರದೆಲ್ಲೆಡೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಇನ್ನು ದಕ್ಷಿಣ ಕನ್ನಡದ ಬಿ.ಸಿರೋಡ್ ನಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆದಿತ್ತು. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪೊಲೀಸರು ಈದ್ ಮಿಲಾದ್ ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ್ಯಾಲಿ ಅನುಮತಿ ನೀಡಿದ್ದರು. ಈ ವೇಳೆ ಬೈಕ್ ರ್ಯಾಲಿ ಮಾಡುತ್ತಾ ಯುವಕರು ಹಸಿರು ಧ್ವಜವನ್ನು ಹಾರಿಸಿದರು. ಇದನ್ನು ಕಂಡ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರ್ಯಾಲಿ ವಿರೋಧಿಸಿ ಬಜರಂಗದಳ ಹಾಗೂ ವಿಹೆಚ್ಪಿ ಹಿಂದೂ ಸಂಘಟನೆಗಳು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.
ಅಲ್ಲದೇ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದೆ. ಬಳಿಕ ಎಚ್ಚೆತ್ತ ಪೊಲೀಸರು ಮುಸ್ಲಿಂ ಯುವಕರಿಂದ ಹಸಿರು ಧ್ವಜ ಹಾಗೂ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.
Click